ವಿಷಕಾರಿ ಮದ್ಯ ಸೇವಿಸಿ 11 ಜನರು ಸಾವು: 12 ಮಂದಿ ತೀವ್ರ ಅಸ್ವಸ್ಥ, ಕಣ್ಣಿನ ದೃಷ್ಟಿ ಕಳೆದುಕೊಂಡ ಹಲವರು
ಛಪ್ರಾ: ಬಿಹಾರದ ಸರನ್ ಜಿಲ್ಲೆಯಲ್ಲಿ ವಿಷಕಾರಿ ಮದ್ಯ ಸೇವಿಸಿ 11 ಜನರು ಸಾವಿಗೀಡಾಗಿದ್ದು, 12 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ. ಈ ಪೈಕಿ ಹಲವರು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ರಾಜೇಶ್ ಮೀನಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಅವರು, ಅಕ್ರಮ ಮದ್ಯ ತಯಾರಿಕೆ ಮತ್ತು ಮಾರಾಟದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದ್ದು, ಸಂಬಂಧಪಟ್ಟ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮತ್ತು ಸ್ಥಳೀಯ ಕಾವಲುದಾರರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.




