ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಶಫೀಕ್ ಬೆಳ್ಳಾರೆಗೆ ನ್ಯಾಯಾಂಗ ಬಂಧನ
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಶಫೀಕ್ ಬೆಳ್ಳಾರೆಯನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದ ಪೊಲೀಸರು ಶನಿವಾರ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಗಳಾದ ಶಫೀಕ್ ಬೆಳ್ಳಾರೆ ಹಾಗೂ ಝಾಕೀರ್ ಸವಣೂರು ಎಂಬುವವರನ್ನ ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದರು. ಇದೀಗ 5ದಿನಗಳ ಬಳಿಕ ಆರೋಪಿಗಳಿಬ್ಬರನ್ನು ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿ ಝಾಕೀರ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಚಾರಣೆಗಾಗಿ ಶಫೀಕ್‌ನನ್ನು ಪೊಲೀಸ್ ಕಸ್ಟಡಿಗೆ ಪಡೆದಿದ್ದರು.





