March 26, 2026

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ: ಒಟ್ಟು ಬಂಧಿತರ ಸಂಖ್ಯೆ 6ಕ್ಕೇರಿಕೆ

0
IMG-20220726-WA0137

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ.

ಸುಳ್ಯ ನಾವೂರು ನಿವಾಸಿ ಹಬೀದ್(22), ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್(28) ಬಂಧಿತರು.

ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಇದೀಗ ಮತ್ತಿಬ್ಬರನ್ನು ಬಂಧಿಸಲಾಗಿದ್ದು, ಈ ಹಿನ್ನೆಲೆ ಬಂಧಿತರ ಸಂಖ್ಯೆ 6ಕ್ಕೇರಿದೆ.

ಜು.26 ರಂದು ರಾತ್ರಿ ಬೆಳ್ಳಾರೆ ಚಿಕನ್ ಸೆಂಟರ್ ಬಳಿ ಪ್ರವೀಣ್ ರವರನ್ನು ಹತ್ಯೆ ಮಾಡಲಾಗಿದ್ದು, ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು

Leave a Reply

Your email address will not be published. Required fields are marked *

error: Content is protected !!