July 6, 2026

ವಿಟ್ಲ: ಅಪಘಾತ ಪ್ರಕರಣ: ಗಾಯಾಳು ದಿನೇಶ್ ಆಲಂಗಾರು ಮೃತ್ಯು

0
image_editor_output_image1061962731-1659937941311.jpg

ವಿಟ್ಲ: ಜೀಪ್ ಗೆ ಆಕ್ಟಿವಾ ಡಿಕ್ಕಿ ಹೊಡೆದ ಘಟನೆ ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ನಡೆದಿದ್ದು, ಅಪಘಾತ ದಿಂದಾಗಿ ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಮೃತರನ್ನು ಅಲಂಗಾರ್ ನಿವಾಸಿ ದಿನೇಶ್ ನಾಯ್ಕ್(40) ಎಂದು ಗುರುತಿಸಲಾಗಿದೆ.

ಇಂದು ಬೆಳಿಗ್ಗೆ ದಿನೇಶ್ ರವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಓವರ್ ಟೇಕ್ ಮಾಡುವ ಭರದಲ್ಲಿ ಜೀಪ್ ಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತರು ಪತ್ನಿ, ಮಗು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!