March 26, 2026

ವಿಟ್ಲ: ಕಣಜದ ಹುಳುವಿನಿಂದ ದಾಳಿಗೊಳಗಾಗಿದ್ದ ವ್ಯಕ್ತಿ ಮೃತ್ಯು

0
image_editor_output_image1432717549-1660018610730

ವಿಟ್ಲ: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ.

ಕೃಷ್ಣ ರವರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೇ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೃಷ್ಣ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!