February 3, 2026

ಪೊಲೀಸ್ ಠಾಣೆಗೆ ನುಗ್ಗಿದ್ದ ಹೆಡ್ ಕಾನ್ಸ್ ಟೇಬಲ್ ಗೆ ಹಿಗ್ಗಾಮುಗ್ಗಾ ಥಳಿತ: ವೀಡಿಯೊ ವೈರಲ್, ಮೂವರು ಆರೋಪಿಗಳ ಬಂಧನ

0
image_editor_output_image1562647368-1660022890078.jpg

ನವದೆಹಲಿ: ರಾಷ್ಟ್ರ ರಾಜಧಾನಿಯ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿದ್ದ ಕೆಲವರು ಹೆಡ್ ಕಾನ್ಸ್ ಟೇಬಲ್ ಗೆ ಹಿಗ್ಗಾಮುಗ್ಗಾ ಥಳಿಸುವ ವಿಡಿಯೋವೊಂದು ಇತ್ತೀಚಿಗೆ ಭಾರೀ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಶಹದಾರದಲ್ಲಿರುವ ಆನಂದ್ ವಿಹಾರ್ ಪೊಲೀಸ್ ಠಾಣೆಯೊಳಗೆ ಕೆಲವರು ಹೆಡ್ ಪೊಲೀಸ್  ಕಾನ್ಸ್ ಟೇಬಲ್  ಮೇಲೆ ಹಲ್ಲೆ ನಡೆಸಿದ್ದು, ಈ ವಿಡಿಯೋ ಜುಲೈ 31ರದ್ದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಇದೀಗ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!