ಬರಿಮಾರ್ : ನೇತ್ರಾವತಿ ನದಿಗೆ ಬಿದ್ದು ಗಂಭೀರಗೊಂಡಿದ್ದ ವಿದ್ಯಾರ್ಥಿ ಮೃತ್ಯು
ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನೀರಿಗೆ ಬಿದ್ದಿದ್ದ ವಿದ್ಯಾರ್ಥಿಯನ್ನು ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದರು.
ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ನೀರಿಗೆ ಬಿದ್ದು ಮೃತಪಟ್ಟ ವಿದ್ಯಾರ್ಥಿ. ಸ್ಥಳೀಯ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜ್ ಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿತ್ತು. . ಬಳಿಕ ಸ್ಥಳೀಯರು ಮತ್ತು ಅಗ್ನಿಶಾಮಕದಳವರು ವಿದ್ಯಾರ್ಥಿಯನ್ನು ಕಾರ್ಯಾಚರಣೆ ನಡೆಸಿ, ಸೋಷಿಯಲ್ ಇಕ್ವಾ ಮಾಣಿಯ ಆಂಬ್ಯುಲೆನ್ಸ್ ಮೂಲಕ ಸಮೀಪದ ಕಲ್ಲಡ್ಕ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸ್ಪಂದಿಸದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ.





