ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ
ಪಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಮಂಗಳವಾರ ಸಂಜೆ ರಾಜೀನಾಮೆ ನೀಡಿದ್ದಾರೆ.
ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಜತೆ ರಾಜಭವನಕ್ಕೆ ತೆರಳಿದ ಅವರು ರಾಜೀನಾಮೆ ಸಲ್ಲಿಸಿದರು.
ಬಳಿಕ ಮಾಧ್ಯಮದವರ ಜತೆ ಮಾತನಾಡಿ, ಎನ್‌ಡಿಎ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಘೋಷಿಸಿದರು. ಇದರೊಂದಿಗೆ, ಬಿಜೆಪಿ ಜತೆಗಿನ ಮೈತ್ರಿ ಕೊನೆಗೊಳಿಸಿರುವ ಬಗ್ಗೆ ಜೆಡಿ(ಯು) ಅಧಿಕೃತವಾಗಿ ಘೋಷಣೆ ಮಾಡಿದಂತಾಗಿದೆ.




