July 6, 2026

ಬೆಳ್ತಂಗಡಿ: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ಸಾವು

0
image_editor_output_image2094453043-1660110768782.jpg

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್‌ಹೌಸ್‌ ಬಳಿ ನಡೆದಿದೆ.

ಮೃತರನ್ನು ಪಿಲಿಕಳ ಪಂಪ್‌ಹೌಸ್‌ ಬಳಿಯ ನಿವಾಸಿ ಸಚಿನ್‌ (17) ಎಂದು ಗುರುತಿಸಲಾಗಿದೆ.

ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

ಆ. 9ರಂದು ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು. ಅವಳಿ ಮಕ್ಕಳ ಪೈಕಿ ಓರ್ವರಾಗಿರುವ ಅವರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!