July 5, 2026

ಬಾಲಕಿ ಸೇರಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರ ಹತ್ಯೆ

0
image_editor_output_image957335403-1660194816258.jpg

ಕೋಲ್ಕತಾ:ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ತಡರಾತ್ರಿ ಪಶ್ಚಿಮಬಂಗಾಳದ ಹೌರಾ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವರದಿ ಪ್ರಕಾರ, ಘಟನೆಯಲ್ಲಿ ಇಬ್ಬರು ಮಹಿಳೆಯರು ಹಾಗೂ ಅಪ್ರಾಪ್ತ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ನಾಲ್ವರು ಒಂದೇ ಕುಟುಂಬದ ಸದಸ್ಯರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಬರ್ಬರ ಹತ್ಯೆಯ ಹಿಂದೆ ದಂಪತಿಯ ಕೈವಾಡ ಇದ್ದಿರುವುದಾಗಿ ಪೊಲೀಸರು ತಿಳಿಸಿದ್ದು, ಪತಿ ಪರಾರಿಯಾಗಿದ್ದು, ಪತ್ನಿಯನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ. ಮನೆಯ ಒಳಗಿನಿಂದ ರಕ್ತ ಹೊರಗೆ ಹರಿದು ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!