ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. 3 ನೇ ಸಿಎಂ ಎಂಬ ಕಾಂಗ್ರೆಸ್ ಟ್ವೀಟ್‌ನಲ್ಲಿ ಸತ್ಯಾಂಶವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ಇನ್ನು ಏಳೆಂಟು ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ಬದಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.
ಆದರೆ, ಪಕ್ಷದ ರಾಜ್ಯಘಟಕ ಅಧ್ಯಕ್ಷ ಅವಧಿ ಮುಗಿಯಲಿದ್ದು, ಅದಕ್ಕೆ ಬದಲಾವಣೆ ಮಾಡಬಹುದು. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಬೊಮ್ಮಾಯಿ ಅವರು ಉಳಿದಿರುವ ಅವಧಿಯನ್ನು ಮುಗಿಸಲಿದ್ದು, ನಾಯಕತ್ವ ಬದಲಾವಣೆಯ ವದಂತಿಗಳ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.




