ಈದ್ಗಾ ಮೈದಾನದಲ್ಲಿ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶ ಇಲ್ಲ: ರಾಜ್ಯ ಸರಕಾರ ತೀರ್ಮಾನ
ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ವಿವಾದವನ್ನು ತಣ್ಣಗಾಗಿಸಲು ಸರಕಾರ ಮುಂದಾಗಿದ್ದು, ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶ ನೀಡದೇ ಇರಲು ನಿರ್ಧರಿಸಿದೆ.
ಕಂದಾಯ ಸಚಿವ ಆರ್.ಅಶೋಕ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಸರಕಾರದ ವತಿಯಿಂದಲೇ ಈ ಬಾರಿ ಧ್ವಜಾರೋಹಣ ನಡೆಸಲಾಗುತ್ತದೆ.
ಸರಕಾರದ ಪರವಾಗಿ ಉಪವಿಭಾಗಾಧಿಕಾರಿ ಧ್ವಜಾರೋಹಣ ನಡೆಸಲಿದ್ದು, ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಯಾವುದೇ ಸಂಘಟನೆಗಳಾಗಲಿ, ಶಾಸಕ ಜಮೀರ್ ಅಹ್ಮದ್ ಖಾನ್ ಅವರಾಗಲಿ ವೈಯಕ್ತಿಕವಾಗಿ ಧ್ವಜಾರೋಹಣ ನಡೆಸುವಂತಿಲ್ಲ. ಸರಕಾರವೇ ಧ್ವಜಾರೋಹಣ ನಡೆಸುತ್ತದೆ ಎಂದು ಸಭೆಯ ಬಳಿಕ ಕಂದಾಯ ಸಚಿವ ಆರ್.ಅಶೋಕ ಸ್ಪಷ್ಟಪಡಿಸಿದ್ದಾರೆ.




