August 23, 2026

ಹತ್ಯೆಯಾದ ಮಸೂದ್ ಮತ್ತು ಫಾಝೀಲ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ತಲಾ 30 ಲಕ್ಷ ರೂ. ಪರಿಹಾರ ವಿತರಣೆ

0
image_editor_output_image1059406494-1660221166364

ಮಂಗಳೂರು: ಇತ್ತೀಚೆಗೆ ಹತ್ಯೆಯಾದ ಮಸೂದ್, ಫಾಝಿಲ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಚೆಕ್ ವಿತರಿಸಲಾಯಿತು.

ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರತೀ ಕುಟುಂಬಕ್ಕೂ 30 ಲಕ್ಷ ರೂಪಾಯಿಯಂತೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ ಎಸ್. ಮುಹಮ್ಮದ್ ಮಸೂದ್ ನೇತೃತ್ವದಲ್ಲಿ ಚೆಕ್ ವಿತರಿಸಿದರು.


ಪ್ರವೀಣ್ ಕುಟುಂಬಕ್ಕೂ ಪರಿಹಾರ ನೀಡಲು ನಿರ್ಧರಿಸಲಾಗಿದ್ದು, ಕುಟುಂಬಸ್ಥರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲಾಗಿತ್ತು. ಸದ್ಯದ ಪರಿಸ್ಥಿತಿ ಹಿನ್ನೆಲೆ ಕುಟುಂಬಸ್ಥರು ಭೇಟಿ ನಿರಾಕರಿಸಿದ್ದರಿಂದ ಮುಂದಿನ ದಿನಗಳಲ್ಲಿ ಪ್ರವೀಣ್ ಕುಟುಂಬಕ್ಕೂ ಪರಿಹಾರ ನೀಡಲಾಗುವುದು ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ. ಎಸ್. ಮುಹಮ್ಮದ್ ಮಸೂದ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!