July 6, 2026

ಉಳ್ಳಾಲ ರಾಷ್ಟ್ರೀಯ ಹೆದ್ದಾರಿ ಬಳಿ ಹಿಟ್ ಆ್ಯಂಡ್ ರನ್: ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಓರ್ವ ಕಾರ್ಮಿಕ ಮೃತ್ಯು, ಮತ್ತೋರ್ವ ಗಾಯಾ

0
image_editor_output_image-2126674484-1660281349003.jpg

ಉಳ್ಳಾಲ: ಅಪರಿಚಿತ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನಮೊಗರು ಬಳಿ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಕಾರ್ಮಿಕನನ್ನು ಬಿಹಾರ ಜಾಮೂಲ್ ನಿವಾಸಿ ವಿಕ್ಕಿ ಖಾನ್ (23) ಹಾಗೂ ಗಾಯಾಳು ಗೋಪಾಲ್ ಪೂಜಾರಿ ಎಂದು ಗುರುತಿಸಲಾಗಿದೆ.

ಹೊರಜಿಲ್ಲೆಯ ಕಾರ್ಮಿಕರಾಗಿದ್ದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೆದ್ದಾರಿ ಬಳಿಯ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!