ಕುಂದಾಪುರ: ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಎಗರಿಸಿದ ಪ್ರಕರಣ, ಓರ್ವ ಆರೋಪಿಯ ಬಂಧನ
ಕುಂದಾಪುರ: ತಾಲೂಕಿನ ಕೊರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡಿನಬೆಟ್ಟು ಸಮೀಪದ ದಬ್ಬೆಕಟ್ಟೆ ಪ್ರಮುಖ ರಸ್ತೆಯ ಸಮೀಪದಲ್ಲಿ ಶಾಲಾ ವಾಹನದಲ್ಲಿ ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ದೇವಕಿ ಪೂಜಾರ್ತಿ ಅವರ ತಲೆಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಎಗರಿಸಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಬೈಂದೂರು ತಾಲೂಕಿನ ತ್ರಾಸಿ, ಹೊಸನಾಡು ಗ್ರಾಮದ ನಿವಾಸಿ ಪ್ರವೀಣ್ (24) ಬಂಧಿತ ಆರೋಪಿ. ರಸ್ತೆಯ ಸಮೀಪದಲ್ಲಿ ಶಾಲಾ ವಾಹನದಲ್ಲಿ ಮಕ್ಕಳ ಬರುವಿಕೆಗಾಗಿ ದೇವಕಿ ಅವರು ಕಾಯುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದ.
ಪರಿಣಾಮ ದೇವಕಿ ಸ್ಥಿತಿ ಗಂಭೀರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.




