March 25, 2026

ಶಿಕ್ಷಣ ಸಚಿವರಿಂದಲೇ ರಾಷ್ಟ್ರಕ್ಕೆ ಅಪಮಾನ: ಪೊಲೀಸ್ ಠಾಣೆಗೆ ದೂರು

0
image_editor_output_image772623240-1660282798201.jpg

ತಿಪಟೂರು: ನಗರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿರಂಗಾ ಯಾತ್ರೆ ನಡೆಸುವ ಸಮಯದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದು ರಾಷ್ಟ್ರಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಘಟಕವು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದೆ.

ನಗರದಲ್ಲಿ ಬುಧವಾರ ಎಬಿವಿಪಿ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸಚಿವರು, ಶಾಲಾ ಮಕ್ಕಳು, ಶಿಕ್ಷಕರು ಭಾಗವಹಿಸಿದ್ದರು. ಈ ಸಮಯದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅವರ ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವಿ. ಹರಿಪ್ರಸಾದ್ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!