February 3, 2026

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನಿಂದ 831 ಗ್ರಾಂ ತೂಕದ ಚಿನ್ನ ವಶ

0
image_editor_output_image1998573840-1660284291563.jpg

ಮಂಗಳೂರು: ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಬುಧವಾರದಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು 831 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ಮೂಲದ ನಿವಾಸಿಯಾಗಿದ್ದು ಈತ ಸುಮಾರು 43.29 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ನ 831ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಒಳ ಉಡುಪಿನ ಹೊಲಿದ ಪಾಕೆಟ್ ನಲ್ಲಿಟ್ಟು ಸಾಗಾಟ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 11ರ ಗುರುವಾರದಂದು ನಡೆದ ಮತ್ತೊಂದು ಘಟನೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಇಂಟೆಲಿಜೆನ್ಸ್ ಘಟಕದ ಕಸ್ಟಮ್ಸ್ ಅಧಿಕಾರಿಗಳು ಸ್ಪೈಸ್‌ಜೆಟ್ ವಿಮಾನದಲ್ಲಿ ದುಬೈಗೆ ತೆರಳಲಿದ್ದ ಭಟ್ಕಳದ ವ್ಯಕ್ತಿಯಿಂದ ಭಾರತೀಯ ಕರೆನ್ಸಿ ಮೌಲ್ಯದ 5,97,040 ರೂ.ಗೆ ಸಮಾನವಾದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!