February 3, 2026

ಬೆಳ್ತಂಗಡಿ: ಅನ್ಯಕೋಮಿನ ಜೋಡಿ ಪತ್ತೆ: ಪೊಲೀಸರ ವಶಕ್ಕೆ ನೀಡಿದ ಹಿಂದೂ ಸಂಘಟನೆ ಕಾರ್ಯಕರ್ತರು

0
image_editor_output_image1229214966-1660290570696

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ.

ಗದಗ ಜಿಲ್ಲೆಯ ನರಗುಂದ ಮೂಲದ ರಫೀಕ್ (21) ಸಂಕದಲ್ ಎಂಬಾತ ಗದಗದ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದು, ಖಾಸಗಿ ಲಾಡ್ಜ್ ಬುಕ್ಕಿಂಗ್ ಗೆ ಮುಂದಾಗಿದ್ದ. ನವ ವಿವಾಹಿತ ಭಿನ್ನಕೋಮಿನ ಜೋಡಿ ಎಂದು ತಿಳಿದ ಕೂಡಲೆ ಲಾಡ್ಜ್ ಸಿಬ್ಬಂದಿ, ರೂಮ್ ನೀಡಲು ನಿರಾಕರಿಸಿದ್ದಾರೆ. ಆಗ ಅವರು ತಕ್ಷಣ ಅಲ್ಲಿಂದ ಮರಳಿ ಬೆಂಗಳೂರು ಕಡೆಗೆ ಬಸ್ ಹತ್ತಿದ್ದರು. ವಾಪಸ್ ಹೋಗುವ ವೇಳೆಯಲ್ಲಿ ಕೊಕ್ಕಡದಲ್ಲಿ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ಅಡ್ಡಗಟ್ಟಿದ್ದಾರೆ.

ನಂತರ ಜೋಡಿಯನ್ನು ನೆಲ್ಯಾಡಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಯುವತಿಯು ಉಪನ್ಯಾಸಕಿ ಎಂದು ತಿಳಿದು ಬಂದಿದ್ದು ತನ್ನ ಮನೆಯವರ ನಂಬರ್ ನೀಡಲು ನಿರಾಕರಿಸಿದ್ದಾಳೆ. ಪೋಲಿಸರು ವಿಚಾರಣೆ ನಡೆಸುತ್ತಿದ್ದಾರೆ

Leave a Reply

Your email address will not be published. Required fields are marked *

error: Content is protected !!