February 2, 2026

75 ನೇ ಸ್ವಾತಂತ್ರ್ಯೋತ್ಸವದ ಆಜಾದಿ ಕಾ ಅಮೃತ ಮಹೋತ್ಸವ: ತುಂಬೆ ಅಣೆಕಟ್ಟನ್ನು ತ್ರಿವರ್ಣ ಬೆಳಕಿನ ವಿದ್ಯುತ್ ದೀಪಗಳಿಂದ ಅಲಂಕಾರ

0
image_editor_output_image1880439290-1660367814907.jpg

ಬಂಟ್ವಾಳ: 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆಯುತ್ತಿರುವ ” ಆಜಾದಿ ಕಾ ಅಮೃತ ಮಹೋತ್ಸವ” ದ ಅಂಗವಾಗಿ ಮಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮಂಗಳೂರು ಮಹಾನಗರ ಪಾಲಿಕಾ ಅಧೀನದ ತುಂಬೆ ಅಣೆಕಟ್ಟನ್ನು ತ್ರಿವರ್ಣ ಬೆಳಕಿನ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಗಮನ ಸೆಳೆಯುತ್ತಿದೆ.

ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿಯವರ ಮುತುವರ್ಜಿಯಲ್ಲಿ ರಾಷ್ಟ್ರಧ್ವಜದ ಬಣ್ಣದ ಬೆಳಕನ್ನು ನೀಡಲಾಗಿದ್ದು ಆಕರ್ಷಣೀಯವಾಗಿ ಮೂಡಿಬಂದಿದೆ.

ಸಾರ್ವಜನಿಕರು ಅಗಸ್ಟ್ 13 ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳ‌ಅಂತಸ್ತಿನಿಂದ ಸಂಜೆ 6.00 ರಿಂದ 9.00 ರವರೆಗೆ ವೀಕ್ಷಣೆ ಮಾಡಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!