February 2, 2026

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image497697605-1660368339348.jpg

ಮಂಗಳೂರು: ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಆಗಸ್ಟ್ 12, ಶುಕ್ರವಾರದಂದು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೂಡುಬಿದಿರೆಯ ತೋಡಾರ್ ಗ್ರಾಮದ ನಿವಾಸಿ ಮೊಹಮ್ಮದ್ ಫೈಝಲ್ (33) ಅಲಿಯಾಸ್ ಕ್ಯಾಬರೆ ಫೈಝಲ್ ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ಮೂಡುಬಿದಿರೆ, ಬಜ್ಪೆ, ಮಂಗಳೂರು ಗ್ರಾಮಾಂತರ, ಅಜೆಕಾರು ಮತ್ತು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕಾಗಿ ನ್ಯಾಯಾಲವು ವಾರೆಂಟ್ ಹೊರಡಿತ್ತು.

ಅದರಂತೆ ಶುಕ್ರವಾರ ಈತ ಮನೆಯಲ್ಲಿರುವ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಈ ವೇಳೆ ಫೈಝಲ್ ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು. ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಫೈಝಲ್ ಡ್ರ್ಯಾಗರ್ ನಿಂದ ಹಾಗೂ ಕಲ್ಲೆಸೆದು ಹಲ್ಲೆಗೆ ಯತ್ನಿಸಿದ್ದಾನೆ. ಆದಾಗ್ಯೂ ಆರೋಪಿಯನ್ನು ಬಂಧಿಸಲಾಗಿದೆ ಎಂದುಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!