ಉಳ್ಳಾಲ: ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ, ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ
ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜೆಪ್ಪು ಸಂಚಾರಿ ಠಾಣೆಯ ಎಎಸ್‌ಐ ಆಲ್ಬರ್ಟ್ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು ಹಾಕುತ್ತಿದ್ದರು. ಈ ನಡುವೆ ನಿರ್ವಾಹಕನೋರ್ವನಿಗೆ ಹಲ್ಲೆ ನಡೆಸಿದ್ದಾರೆ. ಕೃತ್ಯ ಖಂಡಿಸಿದ ಬಸ್ ಸಿಬ್ಬಂದಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.




