March 25, 2026

ಭಾರೀ ಮಳೆಗೆ ಬೆಳೆ ಹಾನಿ: ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ

0
image_editor_output_image1760682827-1660380591591.jpg

ಚಿಕ್ಕಮಗಳೂರು : ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ರೈತರ ಜೀವನಾಡಿಯಾದ ಬೆಳೆಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೊಪ್ಪ ತಾಲೂಕಿನ ಜಯಪುರ ಗ್ರಾಮದ ಗಣೇಶ್ (38) ಮೈಲುತುತ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ.

ತನ್ನ ಜಮೀನಿಗಾಗಿ ಬ್ಯಾಂಕಿನಿಂದ 2 ಲಕ್ಷ  45 ಸಾವಿರ ಕೈ ಸಾಲ ಮಾಡಿಕೊಂಡಿದ್ದ ರೈತ, ಭಾರೀ ಮಳೆಯಿಂದ ಅಡಿಕೆ, ಕಾಫಿ, ಮೆಣಸು ಬೆಳೆಗಳು ಹಾಳಾಗಿದ್ದು, ಕೃಷಿಗಾಗಿ ಮಾಡಿದ್ದ ಸಾಲವನ್ನು ತೀರಿಸುವುದು ಹೇಗೆಂದು ಮನನೊಂದ ಗಣೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!