ಹಾಸನದಿಂದ ಮಡಿಕೇರಿಗೆ ತೆರಳುತ್ತಿದ್ದ ಸರಕಾರಿ ಬಸ್ ಆನೆಕಾಡು ತಿರುವಿನಲ್ಲಿ ಅಪಘಾತ: 11 ಮಂದಿಗೆ ಗಾಯ
ಮಡಿಕೇರಿ: ಹಾಸನದಿಂದ ಮಡಿಕೇರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಿಯಂತ್ರಣ ಕಳೆದುಕೊಂಡು ಆನೆಕಾಡು ತಿರುವಿನಲ್ಲಿ ಅಪಘಾತವಾಗಿದೆ.
ಸರ್ಕಾರಿ ಬಸ್ನಲ್ಲಿ 40 ಮಂದಿ ಪ್ರಯಾಣ ನಡೆಸುತ್ತಿದ್ದು, 11ಮಂದಿಗೆ ಗಂಭೀರ ಗಾಯಗಳಾಗಿದೆ.
ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್ ತೆರಳುತ್ತಿದ್ದು, ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದೆ.ಬಸ್ನಲ್ಲಿದ್ದ 11 ಮಂದಿಗೆ ಗಂಭೀರ ಗಾಯಗಳಾಗಿದೆ.
ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಘಟನಾ ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.




