February 4, 2026

ಪಾತ್ರೆ ಮುಟ್ಟಿದ ಕಾರಣಕ್ಕೆ ಒಂಬತ್ತು ವರ್ಷದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ

0
handcuff-4-2.jpg

ರಾಜಸ್ಥಾನ: 9 ವರ್ಷದ ದಲಿತ ಬಾಲಕನನ್ನು ಶಿಕ್ಷಕನೊಬ್ಬ ಥಳಿಸಿ ಕೊಂದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಅಹಮದಾಬಾದ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನನ್ನಪ್ಪಿದೆ.

ಜುಲೈ 20 ರಂದು ಶಿಕ್ಷಕ ಹಲ್ಲೆ ನಡೆಸಿದ್ದನು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಮೇಲ್ಜಾತಿಯವರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದಾನೆ. ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ಕೊಲೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಬಾಲಕನ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸ್ ತಂಡವನ್ನು ಅಹಮದಾಬಾದ್‌ಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರವಾಲಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!