October 13, 2026

ವಿಟ್ಲ: ಮನೆಗೆ ನುಗ್ಗಿ ತಂದೆ ಮಗನ ಮೇಲೆ ಮಾರಣಾಂತಿಕ ಹಲ್ಲೆ: ಆಸ್ಪತ್ರೆಗೆ ದಾಖಲು

0
image_editor_output_image-692557284-1660463188210

ವಿಟ್ಲ: ಜಾಗದ ವಿಷಯವಾಗಿ ವ್ಯಕ್ತಿಯೋರ್ವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದವರನ್ನು ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ನಿವಾಸಿ ಲೋಕನಾಥ್ ಜೋಗಿ ಮತ್ತು ಅವರ ಮಗ ಹೃದಯ್ ಜೋಗಿ ಎಂದು ಗುರುತಿಸಲಾಗಿದೆ.

 

ಜಾಗದ ವಿಷಯವಾಗಿ ಜಗಳ ನಡೆದಿದ್ದು, ಈ ಹಿನ್ನೆಲೆ ಮನೆಗೆ ಅಕ್ರಮ ಪ್ರವೇಶ ಮಾಡಿದ ಪುನೀತ್ ಜೋಗಿ ಮತ್ತು ತ್ಯಾಗರಾಜ್ ಎಂಬವರು ಲೋಕನಾಥ್ ಜೋಗಿ ಮತ್ತು ಅವರ ಮಗ ಹೃದಯ್ ಜೋಗಿ ರವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದು, ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!