ಟಿಪ್ಪು ಸುಲ್ತಾನ್ ಬ್ಯಾನರ್ ಹರಿದ ಪ್ರಕರಣ: ಪುನೀತ್ ಕೆರೆಹಳ್ಳಿ ಸೇರಿ ನಾಲ್ವರು ಅರೆಸ್ಟ್
ಬೆಂಗಳೂರು: ಟಿಪ್ಪು ಸುಲ್ತಾನ್ ಬ್ಯಾನರನ್ನು ತಡರಾತ್ರಿ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ನಾಲ್ವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ್ ನೀಡಿದ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಈ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ ಗಳಡಿ ಕೇಸ್ ದಾಖಲಾಗಿತ್ತು.
ತಡರಾತ್ರಿ ಪುನಿತ್ ಕೆರೆಹಳ್ಳಿ ಸೇರಿ ಕಿಡಿಗೇಡಿಗಳ ಗ್ಯಾಂಗ್ ಟಿಪ್ಪುವಿನ ಬ್ಯಾನರ್ ಹರಿದು ಪುಂಡಾಟಿಕೆ ಮೆರೆದಿದ್ದರು. ವಿಡಿಯೋ ಮಾಡಿ ವೈರಲ್ ಮಾಡಿದ್ದರು. ಇದು ವ್ಯಾಪಕವಾಗಿ ಟೀಕೆಗೆ ಕಾರಣವಾಗಿತ್ತು.




