ಚಾರ್ಮಾಡಿ ಘಾಟಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರಬಿದ್ದು ಸವಾರ ಮೃತ್ಯು
ಬೆಳ್ತಂಗಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ನವೀನ್(24) ಮೃತಪಟ್ಟ ಸವಾರ.
ರಾಮನಗರದಿಂದ ಧರ್ಮಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೃಹತ್ ಆಕಾರದ ಮರವೊಂದು ಬೈಕ್ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ನವೀನ್ ನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








