ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ: ಸಿಎಂ ಬೊಮ್ಮಾಯಿ ಘೋಷಣೆ
ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಅಮೃತ ಕೊಡುಗೆ ನೀಡಿದ್ದಾರೆ.
ಮಾಣಿಕಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಲವು ಹೊಸ ಯೋಜನೆಗಳನ್ನು ಘೋಷಿಸಿದರು.
ಎಲ್ಲಾ ಸರ್ಕಾರಿ ಶಾಲೆಗಳಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಶೇ.100ರಷ್ಟು ಶೌಚಾಲಯಗಳ ನಿರ್ಮಾಣ ಮಾಡಲಾಗುವುದು.
ಕರ್ನಾಟಕ ಕರಕುಶಲ ಅಭಿಯ ನಿಗಮದಿಂದ ಕುಂಬಾರ, ಕಮ್ಮಾರ, ಬಡಿಗ , ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯವವರು, ವಿಶ್ವಕರ್ಮರು, ಮಾದರು ಮತ್ತಿತ್ತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ.ವರೆಗೆ ಸಾಲ ಸಹಾಯಧನ ಯೋಜನೆ ಜಾರಿಗೊಳಿಸಲಾಗುವುದು.
ರೈತರ ಮಕ್ಕಳಿಗೆ ಜಾರಿಗೆ ಮಾಡಿರುವ ವಿದ್ಯಾನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗುವುದು.
ರಾಜ್ಯದಲ್ಲಿ ಹೊಸದಾಗಿ 4050 ಹೊಸ ಅಂಗನವಾಡಿಗಳ ಪ್ರಾರಂಭ ಮಾಡಲಾಗುವುದು. ಇದರಿಂದ 8100 ಮಹಿಳೆಯರಿಗೂ ಉದ್ಯೋಗ ಸಿಗಲಿದೆ.
ರಾಜ್ಯದ ಸೈನಿಕರು ಸೇವೆ ಸಲ್ಲಿಸುವಾಗ ಮೃತಪಟ್ಟರೆ ಅವರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು.




