ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ: ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ಗೆ ಬಂದ ಸಂದೇಶದಿಂದ ಭಾನುವಾರ ಗೊಂದಲ ಸೃಷ್ಟಿಯಾದ ಪ್ರಕರಣ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಇಂಡಿಗೊ ವಿಮಾನಯಾನ ಸಂಸ್ಥೆಯ ವ್ಯವಸ್ಥಾಪಕ ಕೆ.ಪಿ.ಬೋಪಣ್ಣ ಅವರು ಈ ಕುರಿತು ಭಾನುವಾರ ರಾತ್ರಿ ಠಾಣೆಗೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆಯ 505 1 (ಸಿ) ಮತ್ತು 505 (1 ಬಿ) ಸೆಕ್ಷನ್‌ಗಳ ಅಡಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.




