ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ
ಪುತ್ತೂರು : ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್ ಇವರು ಧ್ವಜಾರೋಹಣಗೈದು ಮಾತನಾಡಿ ದೇಶವು ಅಮೃತ ಮಹೋತ್ಸವವನ್ನು ಆಚರಿಸುವ ಈ ಸಂದರ್ಭದಲ್ಲಿ ದೇಶಕ್ಕಾಗಿ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಸಂಸ್ಥೆಯ ಪ್ರಾಂಶುಪಾಲರಾದ ಮುಹಮ್ಮದ್ ಮುಸ್ತಫ ಇವರು ಭಾರತ ದೇಶವು 75 ವರ್ಷದಲ್ಲಿ ಸಾಗಿ ಬಂದ ಹಾದಿಯ ಬಗ್ಗೆ ಬೆಳಕು ಚೆಲ್ಲಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ ಭಾರತ ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಭಾಗೀದಾರ ರಾಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ದರ್ಬೆ, ಟ್ರಸ್ಟಿಗಳಾದ ಯೂಸುಫ್ ಹಾಜಿ , ಯು.ಅಬ್ದುಲ್ಲಾ ಹಾಜಿ, ಅಸ್ವಾಲಿಹಾ ವುಮೆನ್ಸ್ ಶರೀಅತ್ ,ಪಿ.ಯು.ಕಾಲೇಜ್ ನ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ, ಸಾಲ್ಮರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮೋಹನಾಂಗಿ, ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ಹಸನ್ ಮುದ್ದೋಡಿ, ಅನ್ವರ್ ಕಾಸಿಂ
ಮೊದಲಾದವರು ಉಪಸ್ಥಿತರಿದ್ದರು. ಸಮಾಜ ಸೇವಕ ಕರೀಂ ವಿಟ್ಲ ರವರು ಹೆಲ್ಫ್ ಕೇರ್ ವತಿಯಿಂದ ಕಳೆದ ಸಾಲಿನ ಎಸ್.ಎಸ್.ಎಲ್.ಸಿ. ಯ ಸಾಧಕ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
ಶಿಕ್ಷಕ ಮಂಜುನಾಥ ರೈ ಸ್ವಾಗತಿಸಿದರು. ರವೂಫ್ ಮತ್ತು ಹಸೀನಾ ಕಾರ್ಯಕ್ರಮ ನಿರ್ವಹಿಸಿದರು. ಸಾಯಿಕ ಕೊನೆಗೆ ವಂದಿಸಿದರು. ದೈಹಿಕ ಶಿಕ್ಷಕರಾದ ಅಶ್ರಫ್ ಮತ್ತು ಜಯರಾಮ್ ಸಹಕರಿಸಿದರು



