ಮನೆಯೊಳಕ್ಕೆ ಏಕಾಏಕಿ ನುಗ್ಗಿದ ಟ್ರಕ್: ನಿವೃತ್ತ ಸಬ್‌ಇನ್‌ಸ್ಪೆಕ್ಟರ್, ಪತ್ನಿ ಸೇರಿದಂತೆ ನಾಲ್ವರು ಸಾವು
ಉತ್ತರಪ್ರದೇಶ : ಮನೆಯೊಳಕ್ಕೆ ಏಕಾಏಕಿ ಟ್ರಕ್ ನುಗ್ಗಿ ನಿವೃತ್ತ ಸಬ್‌ಇನ್‌ಸ್ಪೆಕ್ಟರ್, ಅವರ ಪತ್ನಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಭೀಕರ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.
ಕುರವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಿಟಿ ರಸ್ತೆಯಲ್ಲಿರುವ ಖಿರಿಯಾ ಪೀಪಲ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಟ್ರಕ್ ಚಾಲಕನ ಅತೀ ವೇಗದ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡು ಮನೆಗೆ ನುಗ್ಗಿದೆ ಎನ್ನಲಾಗಿದೆ.
ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮೈನ್‌ಪುರಿ ಎಸ್‌ಪಿ ಕಮಲೇಶ್ ದೀಕ್ಷಿತ್, ಟ್ರಕ್ ಚಾಲಕ ನಿಯಂತ್ರಣ ತಪ್ಪಿ ಮನೆಯೊಳಕ್ಕೆ ಟ್ರಕ್ ನುಗ್ಗಿಸಿದ್ದಾನೆ. ಇದರಿಂದ ದುರ್ಘಟನೆ ಸಂಭವಿಸಿದೆ ಎಂದಿದ್ದಾರೆ. ನಿವೃತ್ತ ಸಬ್‌ಇನ್‌ಸ್ಪೆಕ್ಟರ್ ಮತ್ತು ಅವರ ಪತ್ನಿ, ಟ್ರಕ್‌ನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಎಸ್‌ಪಿ ಹೇಳಿದ್ದಾರೆ.




