February 2, 2026

ಕಡಬ: ಕ್ಷುಲಕ ವಿಚಾರಕ್ಕೆ ಇತ್ತಂಡಗಳ ಹೊಡೆದಾಟ, ಇಬ್ಬರಿಗೆ ಗಾಯ

0
image_editor_output_image1141706475-1660629942843.jpg

ಕಡಬ: ಕ್ಷುಲಕ ವಿಚಾರಕ್ಕೆ ಇತ್ತಂಡಗಳ ನಡುವೆ ವಾಗ್ವಾದ ಬೆಳೆದು ಇಬ್ಬರು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಆತೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಹಲ್ಲೆಗೊಳಗಾದ ಯುವಕರನ್ನು ಆತೂರು ಜನತಾ ಕಾಲೊನಿ ನಿವಾಸಿ ನವಾಝ್ ಹಾಗೂ ಆತೂರಿನ ನೌಫಲ್ ಎಂದು ಗುರುತಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ನವಾಝ್ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ನೌಫಲ್ ಸರ್ಕಾರಿ ಆಸ್ಪತೆಗೆ ದಾಖಲಾಗಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!