ಭದ್ರಾವತಿ ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ದೂರು ದಾಖಲು
ಶಿವಮೊಗ್ಗ: ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಿದ್ದರೂ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಭದ್ರಾವತಿ ನೆಹರು ನಗರದಲ್ಲಿ ಡಿಚ್ಚಿ ಮುಬಾರಕ್ ಎಂಬಾತನಿಗೂ ಸುನೀಲ್ ಗೂ ಗಲಾಟೆ ನಡೆದಿದ್ದು, ಈ ವೇಳೆ ಸುನೀಲ್ ಮೇಲೆ ಹಲ್ಲೆ ನಡೆಸಲಾಗಿದೆ.
ಚಾಕುವಿನಿಂದ ಇರಿಯಲು ಯತ್ನಿಸಲಾಗಿದೆ. ಆದರೆ, ಸುನೀಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.




