March 25, 2026

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬಂಧನಗೊಳಗಾದ ಮೂವರು ಪ್ರಮುಖ ಆರೋಪಿಗಳಿಗೆ ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ

0
image_editor_output_image-413876539-1660654540108

ಪುತ್ತೂರು: ಬೆಳ್ಳಾರೆ ಪ್ರವೀಣ್ ನೆಟ್ಟಾರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ ಸುಳ್ಯ ನ್ಯಾಯಾಲಯವು ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಬಂಧಿತ ಹಂತಕ ಆರೋಪಿಗಳನ್ನು ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆ ಇಂದು ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸುಳ್ಯದ ಶಿಹಾಬುದ್ದೀನ್, ರಿಯಾಝ್ ಅಂಕತಡ್ಕ, ಬಶೀರ್ ಎಲಿಮಲೆ ಬಂಧಿತ ಆರೋಪಿಗಳಾಗಿದ್ದಾರೆ.

ಇನ್ನು ಆರೋಪಿಗಳನ್ನು ವಶಕ್ಕೆ ಪಡೆಯುವುದಕ್ಕೆ ಎನ್.ಐ.ಎ ಅಧಿಕಾರಿಗಳಿಂದ ಸಿದ್ಧತೆ ನಡೆದಿದ್ದು, ಕೋರ್ಟ್ ಗೆ ಅರ್ಜಿ‌ ಸಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದು ಬಳಿಕ ವಿಚಾರಣೆಯನ್ನು ನಡೆಸುವ ಸಾಧ್ಯತೆಗಳು ಇವೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!