ವಿಟ್ಲ ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ
ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ. ಧ್ವಜಾರೋಹಣ ಮತ್ತು ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ್ದ ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಬದ್ರಿಯಾ ರವರು ಧ್ವಜಾರೋಹಣ ನೆರವೇರಿಸಿ ನಂತರದ ಸಭಾ ಕಾರ್ಯಕ್ರಮದಲ್ಲಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು.

ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶಾಕಿರ್ ಅಳಕೆಮಜಲು ರವರು ಮಾತನಾಡಿ ಶಾಲಾ ಮಟ್ಟದಲ್ಲೇ ಮಕ್ಕಳಿಗೆ ಯಾವುದೇ ಜಾತಿ ಧರ್ಮ ಭಾಷೆಯ ಭೇದವಿಲ್ಲದೇ ನೈಜ ದೇಶಪ್ರೇಮವನ್ನು ಕಲಿಸಿಕೊಡುವಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯ, ಜನಪ್ರಿಯ ಶಾಲೆಯ ಮುಖ್ಯಸ್ಥರಾದ ಡಾ.ಅಬ್ದುಲ್ ಬಷೀರ್ ರವರು ಉತ್ತಮ ಕಲಿಕೆ ಮಾತ್ರವಲ್ಲದೇ ಇಂತಹ ವಿಚಾರಗಳನ್ನು ಮಕ್ಕಳಿಗೆ ಕಲಿಸಿಕೊಡುವ ಬಗ್ಗೆ ಹೆಚ್ಹು ಒತ್ತು ನೀಡಿದ್ದಾರೆ ಎಂದು ಸ್ವಾತಂತ್ರ್ಯೋತ್ಸವದ ಶುಭಾಷಯ ಕೋರಿದರು.
ಬಳಿಕ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಶ್ರ್ರೀಮತಿ ಪ್ರಿಯಾ ದುರೈರಾಜ್ ರವರು ಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸವಿವರವಾಗಿ ತಿಳಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಕ್ವಿಜ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಮಕ್ಕಳು ನೃತ್ಯ, ದೇಶಭಕ್ತಿ ಗೀತೆ ಹೀಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದ ಪ್ರಾರಂಭದಿಂದಲೂ ಮಕ್ಕಳೇ ಸ್ವಾಗತ, ನಿರೂಪಣೆ, ಧನ್ಯವಾದ ಮಾಡಿ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಶಾಲೆಯ ನಿರ್ದೇಶಕರಾದ ನೌಶೀನ್ ಬದ್ರಿಯಾ, ಆಡಳಿತ ಅಧಿಕಾರಿ ಸಫ್ವಾನ್ ಪಿಲಿಕಲ್ ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಪೋಷಕರು, ಶಿಕ್ಷಕರು, ಮತ್ತು ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.




