ಮನೆಯಲ್ಲಿ ಒಂದೇ ಕುಟುಂಬದ 6 ಮಂದಿ ಶವವಾಗಿ ಪತ್ತೆ: ಬೆಚ್ಚಿಬಿದ್ದ ಗ್ರಾಮಸ್ಥರು
ಜಮ್ಮು: ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಜಮ್ಮುವಿನ ಸಿದ್ರಾ ಪ್ರದೇಶದ ಮನೆಯಲ್ಲಿ ನಡೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಆರು ಮಂದಿಯ ಮೃತದೇಹಗಳನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದ್ದು, ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಆರು ಮಂದಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈದ್ಯಕೀಯ ವರದಿಯಿಂದ ತಿಳಿದು ಬರಬೇಕಿದೆ.




