ಮಸೂದ್ ಕೊಲೆ ಪ್ರಕರಣ: ಬಂಧಿತರಾಗಿದ್ದ ಎಲ್ಲಾ ಆರೋಪಿಗಳಿಗೆ ಆ. 29ರವರೆಗೆ ನ್ಯಾಯಾಂಗ ಬಂಧನ
ಮಂಗಳೂರು: ಸಂಘಪರಿವಾರದ ದುಷ್ಕರ್ಮಿಗಳಿಂದ ಸಾವಿಗೀಡಾದ ಬೆಳ್ಳಾರೆ ಠಾಣೆ ವ್ಯಾಪ್ತಿಯ ಕಳಂಜದ ಅಮಾಯಕ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಆ. 29ರ ವರೆಗೆ ವಿಸ್ತರಿಸಿ ಸುಳ್ಯ ನ್ಯಾಯಾಲಯ ಆದೇಶ ನೀಡಿದೆ.
ಆರೋಪಿಗಳಾದ ಸಂಘಪರಿವಾರದ ಅಭಿಲಾಷ್, ಸುನಿಲ್ ಕೆ., ಸುಧೀರ್, ಶಿವಪ್ರಸಾದ್, ರಂಜಿತ್ ಬಿ., ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ.ಎಂ. ಅವರ ಮೇಲೆ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗ ಕಸ್ಟಡಿಯಲ್ಲಿದ್ದರು.
ಮಂಗಳವಾರ ಕಸ್ಟಡಿಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.




