ಖಾಸಗಿ ಬಸ್ ಪಲ್ಟಿ: ದಂಪತಿ ಮೃತ್ಯು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಕೋಲಾರ: ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ದಂಪತಿ ಮೃತಪಟ್ಟು, 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ.
ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75 ರ ವಿರುಪಾಕ್ಷಿ ಗೇಟ್ ಬಳಿ ಈ ಘಟನೆ ನಡೆದಿದ್ದು,ಬಸ್ ಪಲ್ಟಿಯಲ್ಲಿ ವಿಜಯವಾಡದ ದಂಪತಿಗಳು ಮೃತಪಟ್ಟಿದ್ದಾರೆ.
ಮೃತರನ್ನು ವಿಜಯವಾಡ ಮೂಲದ ಷರೀಫ್ ಹಾಗೂ ಮೈಮುನ್ನಿಸಾ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ.




