March 25, 2026

ಫಾಝಿಲ್ ಕೊಲೆ ಪ್ರಕರಣ, ಮತ್ತೊಬ್ಬ ಆರೋಪಿಯ ಬಂಧನ: ಬಂಟ್ವಾಳದ ಹರ್ಷಿತ್ ಪೊಲೀಸ್ ಬಲೆಗೆ

0
image_editor_output_image1635352971-1660756958465

ಸುರತ್ಕಲ್‌: ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳ ತಾಲೂಕಿನ ಹರ್ಷಿತ್ (28) ಎಂದು ಗುರುತಿಸಲಾಗಿದೆ.

ಈತ ಆರೋಪಿಗಳು ಕೃತ್ಯ ನಡೆಸಿದ ಬಳಿಕ ಅವರನ್ನು ಇನ್ನೊಂದು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಆಶ್ರಯ‌ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಕರೆದುಕೊಂಡು ಹೋಗಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜುಲೈ 28ರಂದು ರಾತ್ರಿ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ರನ್ನು ದುಷ್ಕರ್ಮಿಗಳು ತಲ್ವಾರ್ ಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಪ್ರಕರಣ ಸಂಬಂಧ ಈಗಾಗಲೇ ಕೃತ್ಯದಲ್ಲಿ ನೇರ ಭಾಗಿಯಾಗಿದ್ದ 6 ಮಂದಿ ಹಾಗೂ ಕೃತ್ಯ ನಡೆಸಲು ಕಾರು ನೀಡಿದ್ದ ಓರ್ವ ಸೇರಿ ಒಟ್ಟು ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹರ್ಷಿತ್ ಬಂಧನದೊಂದಿಗೆ ಪ್ರಕರಣದಲ್ಲಿ ಒಟ್ಟು 8 ಮಂದಿ ಬಂಧನಕ್ಕೊಳಗಾದಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!