ಸಿದ್ದರಾಮಯ್ಯರ ಕಾರಿಗ ಮೊಟ್ಟೆ ಎಸೆದ ಪ್ರಕರಣ: 9 ಮಂದಿ ಬಿಜೆಪಿ ಕಾರ್ಯಕರ್ತರ ಬಂಧನ
ಕುಶಾಲನಗರ (ಕೊಡಗು ಜಿಲ್ಲೆ): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಕುರಿತು ವಶಕ್ಕೆ ತೆಗೆದುಕೊಳ್ಳಲಾದ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಅವರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸೇರಿದಂತೆ ಬಿಜೆಪಿ ಮುಖಂಡರು ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ ತಡರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಗುರುವಾರ ಇಲ್ಲಿಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರಿನಲ್ಲಿ ಮೊಟ್ಟೆ ಎಸೆಯಲಾಗಿತ್ತು.




