ಮಾಣಿ: ಕಾರು ಮತ್ತು ಲಾರಿ ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ
ಬಂಟ್ವಾಳ: ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿಯಲ್ಲಿ ನಡೆದಿದೆ.
ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಮಾಣಿಯಲ್ಲಿ ಅಪಘಾತ ಸಂಭವಿಸಿದೆ.
ಘಟನೆಯಿಂದಾಗಿ ಕಾರು ಚಾಲಕ ನೆಹರು ನಗರ ನಿವಾಸಿ ಮಹಾಲಿಂಗ ಎಂಬವರು ಸಣ್ಣ-ಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.





