March 25, 2026

ಮಾಣಿ: ಯುವಕ ಮಂಡಲ ವತಿಯಿಂದ ಮೊಸರು ಕುಡಿಕೆ ಉತ್ಸವ: ನಾವೆಲ್ಲರೂ ಭಾವೈಕ್ಯತೆ ಮತ್ತು ಸಾಮಾಜಿಕ ಸಾಮರಸ್ಯಕ್ಕಾಗಿ ಪ್ರಯತ್ನಿಸಬೇಕು: ಮಾಜಿ ಸಚಿವ ರಮಾನಾಥ ರೈ

0
image_editor_output_image1103587626-1660926191155

ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಮುಂದುವರಿದಾಗ ಯಶಸ್ಸನ್ನು ಸಾಧಿಸಬಹುದು, ಭೂಮಿಗೆ ಹುಟ್ಟಿಬಂದ ನಾವೆಲ್ಲರೂ ಭಾವೈಕ್ಯತೆ ಮತ್ತು ಸಾಮಾಜಿಕ ಸಾಮರಸ್ಯಕ್ಕಾಗಿ ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಮಾಣಿ ಯುವಕ ಮಂಡಲದ ಆಶ್ರಯದಲ್ಲಿ ಕಳೆದ ಹಲವು ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ ಮೊಸರುಕುಡಿಕೆ ಕುಡಿಕೆ ಉತ್ಸವ ಸಮಾಜಕ್ಕೆ ಮಾದರಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
     ಮಾಣಿ ಯುವಕ ಮಂಡಲ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದಲ್ಲಿ ಅವರು ಮಾತನಾಡಿದರು.

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಮಾಣಿಗುತ್ತು ಸಚಿನ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
       ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಯಂ.ಯಸ್.ಮಹಮ್ಮದ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮಾಣಿ ಲಯನ್ಸ್ ಕ್ಲಬ್ ನಿಕಟಪೂರ್ವಾಧ್ಯಕ್ಷ ಡಾ.ಶ್ರೀನಾಥ್ ಆಳ್ವ, ಬಂಟ್ವಾಳ ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಸೂರ್ಯ, ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ನಿರಂಜನ್ ರೈ ಕುರ್ಲೆತ್ತಿಮಾರು  ಭಾಗವಹಿಸಿದ್ದರು.
      ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗಂಗಾಧರ ರೈ ತುಂಗೆರೆಕೋಡಿಯವರನ್ನು ಸನ್ಮಾನಿಸಲಾಯಿತು.
     ಶ್ರೀ ಕಾನಲ್ತಾಯ ಮಹಾಕಾಳಿ ಭಜನಾ ಮಂಡಳಿ ಕಲ್ಲೆಟ್ಟಿ ಇದರ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರುಗಿತು.
      ಪುರುಷರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮಾಣಿ ಗ್ರಾಮ ಪಂಚಾಯತ್ ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ನಾರಾಯಣ ಶೆಟ್ಟಿ ತೋಟ, ಮಾಜಿ ಅಧ್ಯಕ್ಷೆ ವನಿತಾ, ಯುವಕ ಮಂಡಲದ ಕಾರ್ಯದರ್ಶಿ ಜಗದೀಶ್ ಜೈನ್, ಕೋಶಾಧಿಕಾರಿ ನಾಗರಾಜ ಪೂಜಾರಿ, ಕ್ರೀಡಾ ಕಾರ್ಯದರ್ಶಿ ದಯಾನಂದ ಪೂಜಾರಿ, ಸದಸ್ಯರಾದ ಹರೀಶ್ ಶೆಟ್ಟಿ ಸಾಗು, ಮಹಮ್ಮದ್ ಹಬೀಬ್, ಗಿರೀಶ್ ಪೂಜಾರಿ, ಅಬ್ದುಲ್ ಮಜೀದ್, ವಿಕೇಶ್ ಶೆಟ್ಟಿ, ಪ್ರಕಾಶ್ ಮಾಣಿ, ಮೂಸಾ ಕರೀಂ, ಅಬ್ದುಲ್ ಅಝೀಝ್, ಹರೀಶ್ ಮಾಣಿ, ಅಶ್ರಫ್ ಕಾಪಿಕಾಡು, ವಸಂತ ಸಾಗರ್ ಮೊದಲಾದವರು ಉಪಸ್ಥಿತರಿದ್ದರು.
      ಯುವಕ ಮಂಡಲದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!