February 4, 2026

ಟ್ರ್ಯಾಕ್ಟರ್, ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ: ತೀರ್ಥಯಾತ್ರೆಗೆ ಹೋಗಿ ಹಿಂದಿರುಗುತ್ತಿದ್ದ 7 ಮಂದಿ ಯಾತ್ರಿಕರು ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

0
image_editor_output_image-607000557-1660964960622.jpg

ಜೈಪುರ : ಟ್ರ್ಯಾಕ್ಟರ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಯಾತ್ರೆಗೆ ಹೋಗಿ ಹಿಂದಿರುಗುತ್ತಿದ್ದ ೭ ಮಂದಿ ಯಾತ್ರಿಕರು ಸಾವನ್ನಪ್ಪಿ, ಹದಿನೈದಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಹದಿನೈದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಯಾತ್ರಿಕರು ಜೈಸಲ್‌ಮೆರ್ ರಾಮದೇವ್ರಾ ಮಂದಿರಕ್ಕೆ ಭೇಟಿ ನೀಡಿ ತಮ್ಮ ಊರಿಗೆ ಹಿಂತಿರುಗುತ್ತಿದ್ದ ವೇಳೆ ರಾಜಸ್ಥಾನದ ಪಾಲಿ ಸಮೀಪ ಎದುರಿನಿಂದ ಬಂದ ಟ್ರಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆ ಕುರಿತು ಸುಮೇರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಧಿಕಾರಿ ರಾಮೇಶ್ವರ ಭಾಟಿ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!