February 4, 2026

ಮುಲ್ಕಿ: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಯುವಕ ಮುನೀರ್ ಮೃತ್ಯು

0
image_editor_output_image-1220263974-1660989324585

ಮುಲ್ಕಿ: ಬೈಕ್ ನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಕಾರೊಂದು ಡಿಕ್ಕಿಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ಮುಲ್ಕಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಮುಲ್ಕಿಯ ಕೆ.ಎಸ್. ರಾವ್ ನಗರದ ಬದ್ರುಲ್ ಮುನೀರ್ (23)ಎಂದು ಗುರುತಿಸಲಾಗಿದೆ.

ಕನ್ ಸ್ಟ್ರಕ್ಷನ್ ಸಂಸ್ಥೆಯೊಂದರಲ್ಲಿ  ಉದ್ಯೋಗಿಯಾಗಿದ್ದ ಮುನೀರ್ ಕೆಲಸ ಮುಗಿಸಿಕೊಂಡು ಗುರುವಾರ ರಾತ್ರಿ ತನ್ನ ಮನೆಗೆ ತೆರಳಲು ಕೊಲ್ನಾಡು ಜಂಕ್ಷನ್ ಬಳಿ ಬೈಕ್ ನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಮಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರು ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮುನೀರ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!