ಬಿಹಾರ ಸಿಎಂ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ: 13 ಮಂದಿ ಆರೋಪಿಗಳ ಬಂಧನ
ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಭಾನುವಾರ ಕಲ್ಲು ತೂರಾಟ ನಡೆದಿರುವ ಘಟನೆಗೆ ಸಂಬಂಧಿಸಿ ಪಾಟ್ನಾ ಪೊಲೀಸರು ಹದಿಮೂರು ಮಂದಿಯನ್ನು ಬಂಧಿಸಿದ್ದಾರೆ.
ಪಾಟ್ನಾ-ಗಯಾ ಮಾರ್ಗದ ಗೌರಿಚಕ್‌ನ ಸೊಹ್ಗಿ ಗ್ರಾಮದಲ್ಲಿ ರವಿವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಜನರ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು ಘಟನೆಯಲ್ಲಿ ನಾಲ್ಕು ಕಾರಿನ ಗಾಜುಗಳು ಪುಡಿಪುಡಿಯಾಗಿತ್ತು.




