February 3, 2026

ಭಟ್ಕಳ: ಬಾಲಕ 2 ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದ ಗೋವಾದಲ್ಲಿ ಪತ್ತೆ

0
image_editor_output_image-1678723468-1661149391023.jpg

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಅಲಿ ಇಸ್ಲಾಂ ಸಾದಾ ಎಂಬ ಬಾಲಕ ಎರಡು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದು, ಇದೀಗ ಗೋವಾದಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಲಾಗಿದ್ದು, ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಕಾರ್ಯಚರಣೆ ಮುಂದುವರೆಸಿದ ಭಟ್ಕಳ ನಗರ ಠಾಣೆ ಪೊಲೀಸರು ಇದೀಗ ಬಾಲಕನನ್ನು ಗೋವಾದಲ್ಲಿ ಪತ್ತೆ ಮಾಡಿ ರಕ್ಷಿಸಿದ್ದಾರೆ.

ಇನ್ನು ಬಾಲಕನ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ಬಾಲಕ ನಾಪತ್ತೆ ಬಗ್ಗೆ ದೂರು ನೀಡಿದ್ದು, ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕನನ್ನು ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.

ಕೌಟುಂಬಿಕ ದ್ವೇಷದ ಕಾರಣಕ್ಕೆ ಬಾಲಕನನ್ನು ಅಪಹರಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!