ಹೊಸದಿಲ್ಲಿ: ಯುಪಿಐ ಆಧರಿತ ಪೇಮೆಂಟ್ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ.
ಯುಪಿಐ ಪಾವತಿ ಸೇವೆಗಳ ಮೇಲೆ ಶುಲ್ಕ ವಿಧಿಸುವ ಕುರಿತು ಗಂಭೀರ ಚಿಂತನೆಯಲ್ಲಿದೆ ಎಂಬ ವದಾಂತಿಗಳ ನಡುವೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ ಯುಪಿಐ ಪಾವತಿ ಸೇವೆಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಹೇಳಿದೆ.