ಪ್ರವಾದಿ ಮುಹಮ್ಮದ್ (ಸ.ಅ) ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕನ ವಿರುದ್ಧ ಎಫ್ ಐಆರ್ ದಾಖಲು
ಹೈದರಾಬಾದ್: ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿರುವುದಾಗಿ ವರದಿ ತಿಳಿಸಿದೆ.
ಪ್ರವಾದಿ ಮುಹಮ್ಮದ್ ಕುರಿತು ನೀಡಿರುವ ಹೇಳಿಕೆಯ ವಿಡಿಯೋವನ್ನು ಶಾಸಕ ರಾಜಾ ಸಿಂಗ್ ಬಿಡುಗಡೆ ಮಾಡಿದ್ದ ನಂತರ ಹೈದರಾಬಾದ್ ನಲ್ಲಿ ಪ್ರತಿಭಟನೆ ನಡೆದಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು ಎಂದು ವರದಿ ವಿವರಿಸಿದೆ.
ನಗರ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗ ಸೇರಿದಂತೆ ಹಲವೆಡೆ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರತಿಭಟನೆ ನಡೆದಿದ್ದು, ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿರುವುದಾಗಿ ವರದಿ ಹೇಳಿದೆ.




