ವಿಟ್ಲ: ಬಂಟ್ವಾಳ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲಾ ವಾಲಿಬಾಲ್ ಪಂದ್ಯಾಟ ಉದ್ಘಾಟನೆ: ಒಕ್ಕೆತ್ತೂರು ಶಾಲೆಯಲ್ಲಿ ಆಯೋಜನೆ
ವಿಟ್ಲ: ದ.ಕ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಒಕ್ಕೆತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ೧೪ ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ ಒಕ್ಕೆತ್ತೂರು ಶಾಲೆಯಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಉದ್ಘಾಟಿಸಿ, ಮಾತನಾಡಿ ಒಕ್ಕೆತ್ತೂರು ಸರಕಾರಿ ಶಾಲೆಯೂ ಖಾಸಗಿ ಶಾಲೆಗಳನ್ನು ಮೀರಿಸುವಂತೆ ಅಭಿವೃದ್ಧಿ ಹೊಂದುತ್ತಿದೆ. ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಜತೆಗೆ ಅವರನ್ನು ಸಮಾಜದಲ್ಲಿ ಉತ್ತಮ ಸ್ಥಾನಮಾನ ದೊರಕುವಂತೆ ಮಾಡುತ್ತಿದೆ ಎಂದರು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮೊಹಮ್ಮದ್ ಹಾರೀಸ್ ಸಿ.ಎಚ್ ಅಧ್ಯಕ್ಷತೆ ವಹಿಸಿದ್ದರು.
ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್,
ಪಟ್ಟಣ ಪಂಚಾಯತ್ ಸದಸ್ಯ ಡೀಕಯ್ಯ, ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರು ಶಿವಪ್ರಸಾದ್ ಶೆಟ್ಟಿ, ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ತಾಲೂಕು ಅಧ್ಯಕ್ಷ ಜಯರಾಮ್,
ದಕ್ಷಿಣ ಕನ್ನಡ ಜಿಲ್ಲಾ ಸಂಘದ ಉಪಾಧ್ಯಕ್ಷ ನವೀನ್, ವಲಯದ ನೊಡೆಲ್ ಅಧಿಕಾರಿ ರಾಜೇಂದ್ರ ರೈ, ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಜಿಲ್ಲಾ ಕಾರ್ಯದರ್ಶಿ ಶಶಿಕಾಂತ್, ಶುಭಲಕ್ಮಿ, ಯತೀಶ್, ಮುದರ, ನಿವೃತ್ತ ಮುಖ್ಯ ಶಿಕ್ಷಕ ಮೋಹನ್ ರಾವ್, ಸುನೀತ ರಾವ್, ಅಶ್ರಫ್ ಒಕ್ಕೆತ್ತೂರು, ಸಂಘದ ಪ್ರತಿನಿಧಿ ಇಸ್ಮಾಯಿಲ್ ಮಂಗಳಪದವು, ಮಾಜಿ ಎಸ್ ಡಿ ಎಮ್ ಸಿ ಅಧ್ಯಕ್ಷ ಎಮ್ ಕೆ ಮೂಸ ಉಪಸ್ಥಿತರಿದ್ದರು.
ಒಕ್ಕೆತ್ತೂರು ಸರ್ಕಾರಿ ಉನ್ನತ್ತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಗೀತಾ ಬಿ ಸ್ವಾಗತಿಸಿದರು. ತೌಸಿಫ್ ಅಹ್ಮದ್ ನಿರೂಪಿಸಿದರು. ಶಿಕ್ಷಕ ರಾಘವೇಂದ್ರ ಕುಮಾರ್ ವಂದಿಸಿದರು.
,,,,,,





