ವಿಟ್ಲ: ಪ್ರಾಥಮಿಕ ಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟ: SVS ಬಂಟ್ವಾಳ ಹಾಗೂ ಶಂಭೂರು ಸರಕಾರಿ ಶಾಲೆಗೆ ಪ್ರಶಸ್ತಿ
ವಿಟ್ಲ: ಒಕ್ಕೆತ್ತೂರು ಸರಕಾರಿ ಶಾಲೆಯಲ್ಲಿ ನಡೆದ 14 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ SVS ಅಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ಹಾಗೂ ಬಾಲಕಿಯರ ವಿಭಾಗದಲ್ಲಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಶಂಭೂರು ಪ್ರಥಮ ಸ್ಥಾನ ಪಡೆದುಕೊಂಡಿದೆ.

ಬಾಲಕಿರ ವಿಭಾಗದಲ್ಲಿ ಇನ್ಫೇಟ್ ಜೇಸಸ್ ಅಂಗ್ಲ ಮಾಧ್ಯಮ ಶಾಲೆ ಮೊಡಂಕಾಪು ಮತ್ತು ದ್ವಿತೀಯ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಅನಂತಾಡಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ದ.ಕ ಜಿಲ್ಲಾ ಪಂಚಾಯತ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಒಕ್ಕೆತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು.




